Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಳ್ತಂಗಡಿ: ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದ ‘ಬೆಸ್ಟ್ ಎಂಎಲ್‌ಎ’ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.

Out Look Fashion

ಜುಲೈ 7ರಂದು ಶಾಸಕ ಹರೀಶ್ ಪೂಂಜಾ ಅವರ ಸ್ವಗೃಹ **‘ಮಿಥಿಲಾ’**ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್. ಇಂದಬೆಟ್ಟು ಅವರ ನೇತೃತ್ವದಲ್ಲಿ ಕಾರ್ಯಕರ್ತರು ಗೌರವ ಸಮರ್ಪಿಸಿದರು.

Jaya Refrigeration and Air Condition

ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕರ್ತರು, ಬೆಳ್ತಂಗಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾ ಅವರ ನಿರಂತರ ಶ್ರಮವೇ ಕಾರಣವಾಗಿದ್ದು, ಜನರ ಮನೆ-ಮನಗಳನ್ನು ತಲುಪಿದ ಅವರ ಸೇವೆಗೆ ಈ ಪ್ರಶಸ್ತಿ ಸಂದಿರುವುದು ತಾಲೂಕಿನ ಪ್ರತಿಯೊಬ್ಬರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಜನರ ಆಶೀರ್ವಾದದೊಂದಿಗೆ ಗೆಲುವು ಸಾಧಿಸಿ, ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಬೆಳ್ತಂಗಡಿ ಕ್ಷೇತ್ರವನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿ ರೂಪಿಸಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಮಾಜಿ ಪಂಚಾಯತ್ ಅಧ್ಯಕ್ಷ ಆನಂದ ಅಡಿಲು, ಸದಸ್ಯರಾದ ಪ್ರಮೋದ್ ಕುಮಾರ್, ಸತೀಶ್ ಬೆದ್ರಬೆಟ್ಟು, ವಿವಿಧ ಬೂತ್ ಅಧ್ಯಕ್ಷರು, ತಾಲೂಕು ಯುವ ಮೋರ್ಚಾ ಹಾಗೂ ರೈತ ಮೋರ್ಚಾ ಪದಾಧಿಕಾರಿಗಳು, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಆದಿಚುಂಚನಗಿರಿ ಶ್ರೀಮಠದ ಅರ್ಚಕರು ಸೇರಿದಂತೆ ಪಕ್ಷದ ಮುಖಂಡರು, ಹಿರಿಯರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.