



ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು 32 ವರ್ಷದ ಇರ್ಫಾನ್, ತಂದೆ ಅಬುಸಾಲಿ ಎಂದು ಗುರುತಿಸಲಾಗಿದೆ. ಈತ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿಯಾಗಿದ್ದು, ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲುವಿನ ಅಬುಬಕರ್ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ. ಇರ್ಫಾನ್ ಮಂಗಳೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುವ ಸೆಲೆನ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ.

ಪೊಲೀಸರ ಮಾಹಿತಿ ಪ್ರಕಾರ, ಜುಲೈ 9ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಆರೋಪಿತನು ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ ಅಸಭ್ಯ ಸನ್ನೆಗಳನ್ನು ಮಾಡಿದ್ದಲ್ಲದೆ, ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ವಿದ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜುಲೈ 10ರಂದು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.
