Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ (SIR – Special Intensive Revision) ಕುರಿತು ಕಾರ್ಯಕರ್ತರಿಗೆ ಮಾಹಿತಿ ನೀಡುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷದ ಬೆಂಗಳೂರು ಕಾನೋನು ಪ್ರಕೋಷ್ಟ ವತಿಯಿಂದ ವಿಶೇಷ ಸಭೆಯನ್ನು ಆಯೋಜಿಸಲಾಗಿದೆ.

Out Look Fashion

ಜುಲೈ 12, 2026ರಂದು ಬೆಳಿಗ್ಗೆ 10:30ಕ್ಕೆ ಬೆಂಗಳೂರಿನ ಜಗನ್ನಾಥ ಭವನದಲ್ಲಿ ಈ ಸಭೆ ನಡೆಯಲಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಮಗ್ರ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ.

Jaya Refrigeration and Air Condition

ಕಾರ್ಯಕ್ರಮವನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ ಚಲವಾದಿ ನಾರಾಯಣಸ್ವಾಮಿ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ವಕೀಲ ಅರುಣ್ ಶ್ಯಾಮ್ ಭಾಗವಹಿಸಲಿದ್ದು, ಎಸ್.ಐ.ಆರ್. ರಾಜ್ಯ ಸಂಚಾಲಕರಾದ ಎನ್. ದತ್ತಾತ್ರಿ ನೆರವೇರಿಸಲಿದ್ದಾರೆ.

ಈ ಸಭೆಯಲ್ಲಿ ಬಿಜೆಪಿ ಕಾನೂನು ಪ್ರಕೋಷ್ಟದ ಪದಾಧಿಕಾರಿಗಳು, ರಾಜ್ಯ ಹಾಗೂ ಜಿಲ್ಲಾ ಸಂಚಾಲಕರು, ಸಹ ಸಂಚಾಲಕರು ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅಗತ್ಯ ದಾಖಲೆಗಳು ಹಾಗೂ ಕಾರ್ಯವಿಧಾನದ ಬಗ್ಗೆ ವಿವರವಾದ ಮಾಹಿತಿ ನೀಡಲಾಗುತ್ತದೆ.