Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಆಯುಧ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ನಡೆ ಏಕಪಕ್ಷೀಯವಾಗಿದೆ ಎಂದು ಆರೋಪಿಸಿರುವ ವಿಶ್ವ ಹಿಂದೂ ಪರಿಷತ್, ಸಂತ್ರಸ್ತ ಯುವತಿಯ ಮೇಲಿನ ಕೌಂಟರ್ ಕೇಸ್ ಅನ್ನು ತಕ್ಷಣವೇ ರದ್ದುಪಡಿಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿದೆ.

Out Look Fashion

ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಪ್ರಚಾರ ಸಹ ಪ್ರಮುಖ ಪ್ರದೀಪ್ ಸರಿಪಲ್ಲ ಅವರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ಸಾರ್ವಜನಿಕ ರಸ್ತೆಯಲ್ಲಿ ಒಬ್ಬಂಟಿ ಹಿಂದೂ ಯುವತಿಯ ಎದುರು ಆಯುಧ ಪ್ರದರ್ಶಿಸಿ ಪ್ರಾಣಭಯ ಉಂಟುಮಾಡಿದ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ.

Jaya Refrigeration and Air Condition

ಘಟನೆಯನ್ನು ‘ತಪ್ಪು ಗ್ರಹಿಕೆ’ ಅಥವಾ ‘ಬ್ರೆಡ್‌ಗೆ ಜಾಮ್ ಹಚ್ಚುವ ಚೂರಿ’ ಎಂದು ಬಿಂಬಿಸಿ ಸಾಮಾನ್ಯೀಕರಿಸುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ ಎಂದು ಅವರು ಆರೋಪಿಸಿದ್ದಾರೆ.

ಘಟನೆಯಿಂದ ಆತಂಕಕ್ಕೆ ಒಳಗಾದ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷತ್ ಮುಖಂಡರಾದ ಶರಣ್ ಪಂಪ್‌ವೆಲ್, ಶಿವಾನಂದ್ ಮೆಂಡನ್ ಹಾಗೂ ಜಿಲ್ಲಾ ಪದಾಧಿಕಾರಿಗಳ ತಂಡ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯುವತಿ ದೂರು ನೀಡಿದ ನಂತರ ನಿಷ್ಪಕ್ಷಪಾತ ತನಿಖೆ ನಡೆಸುವ ಬದಲು, ಆಕೆ ಮತ್ತು ಕುಟುಂಬದ ಮೇಲೆಯೇ ಕೌಂಟರ್ ಕೇಸ್ ದಾಖಲಿಸಿರುವುದು ನ್ಯಾಯಸಮ್ಮತವಲ್ಲ ಎಂದು ವಿಹಿಂಪ ಆರೋಪಿಸಿದೆ. ರಾಜಕೀಯ ಒತ್ತಡಕ್ಕೆ ಮಣಿಯದೆ, ಯುವತಿ ಮತ್ತು ಕುಟುಂಬದ ಮೇಲಿನ ಪ್ರಕರಣವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದೆ.

ಈ ಸಂಬಂಧ ಈಗಾಗಲೇ ಕರ್ನಾಟಕ ರಾಜ್ಯಪಾಲರಿಗೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರ ಮೂಲಕ ಮನವಿ ಸಲ್ಲಿಸಲಾಗಿದ್ದು, ಸಂಬಂಧಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

ಯುವತಿಯ ಮೇಲಿನ ಕೌಂಟರ್ ಕೇಸ್ ಅನ್ನು ರದ್ದುಪಡಿಸಿ ಸೂಕ್ತ ನ್ಯಾಯ ನೀಡದಿದ್ದರೆ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ.