Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಫಾಲ್ಸ್‌ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ಅಡ್ಡಗಟ್ಟಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ಐವರು ಸೇರಿದಂತೆ ಇತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Out Look Fashion

ಮಂಗಳೂರಿನಲ್ಲಿ ಉದ್ಯೋಗದಲ್ಲಿರುವ ದೂರುದಾರ ಯುವತಿ, ಜುಲೈ 12ರಂದು ರಜೆ ಹಿನ್ನೆಲೆ ತನ್ನ ಸ್ನೇಹಿತನೊಂದಿಗೆ ದಿಡುಪೆ ಫಾಲ್ಸ್‌ಗೆ ತೆರಳಿದ್ದರು. ಈ ವೇಳೆ ಪಾರ್ಕಿಂಗ್ ಪ್ರದೇಶದಲ್ಲಿ ಸುಮಾರು 5ರಿಂದ 6 ಮಂದಿ ಅವರನ್ನು ಅಡ್ಡಗಟ್ಟಿ, ಅನ್ಯಧರ್ಮೀಯ ಯುವಕನೊಂದಿಗೆ ಬಂದಿರುವುದನ್ನು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

Jaya Refrigeration and Air Condition

ದೂರಿನ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 75/2026 ದಾಖಲಿಸಲಾಗಿದ್ದು, ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್ ಹಾಗೂ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS-2023) ಕಲಂ 126(2), 352, 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಆರೋಪಗಳ ಪರಿಶೀಲನೆಯ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.