




ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಹಾಗೂ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಉಳ್ಳಾಲ ಮೆಲಂಗಡಿ ದರ್ಗಾ ರಸ್ತೆ ನಿವಾಸಿ ಸುರ್ಮೋ ಇಮ್ರಾನ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯ ಎರಡು ಪ್ರಕರಣಗಳು, ಬರ್ಕೆ ಪೊಲೀಸ್ ಠಾಣೆಯ ಎರಡು ಪ್ರಕರಣಗಳು ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಒಂದು ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದ ವಾರಂಟ್ ಬಾಕಿ ಇತ್ತು.
ಮಂಗಳೂರು ನಗರ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯು ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಕಾರ್ಯಾಚರಣೆಯನ್ನು ಮಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆಸಲಾಗಿದೆ.
