Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರು (Teacher) ನೀಡಿದ ಅತಿಯಾದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾರದೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ (Student) ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ(Suicide Attempt) ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Out Look Fashion

ಮರಿಯಪ್ಪನಪಾಳ್ಯದಲ್ಲಿರುವ 13 ವರ್ಷದ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಶಾಲೆಯಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಶಿಕ್ಷಕರ ಈ ಕ್ರೂರ ವರ್ತನೆ ಮತ್ತು ಶಾಲಾ ಮಂಡಳಿಯ ನಿರಂತರ ಟಾರ್ಚರ್‌ನಿಂದಾಗಿ ವಿದ್ಯಾರ್ಥಿ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎನ್ನಲಾಗಿದೆ.

Jaya Refrigeration and Air Condition

ಮನನೊಂದ ವಿದ್ಯಾರ್ಥಿ ಮರಿಯಪ್ಪನಪಾಳ್ಯದಲ್ಲಿರುವ ತನ್ನ ಮನೆಯ ಬಿಲ್ಡಿಂಗ್ ಮೇಲಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇನ್ನು ಬಿಲ್ಡಿಂಗ್‌ನಿಂದ ಬಿದ್ದ ರಭಸಕ್ಕೆ ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡು ಅಸ್ವಸ್ಥನಾಗಿದ್ದು, ತಕ್ಷಣವೇ ಆತನನ್ನು ನಾಯಂಡಹಳ್ಳಿಯ ನೇಟಸ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗೆ ತುರ್ತು ಚಿಕಿತ್ಸೆ ಮುಂದುವರಿದಿದೆ.

ಗಾಯಾಳು ವಿದ್ಯಾರ್ಥಿಯ ತಂದೆ ಮಹೇಶ್ ಕುಮಾರ್ ಕಿರಾಣಿ ಅಂಗಡಿ ನಡೆಸುತ್ತಿದ್ದು, ತಾಯಿ ಕುಸುಮ ಕೂಡ ಅದೇ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಮಗನಿಗೆ ಆಗಿರುವ ಸ್ಥಿತಿಯನ್ನು ಕಂಡು ಪೋಷಕರು ಹಾಗೂ ಸಂಬಂಧಿಕರು ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಯ ಆತ್ಮಹತ್ಯೆ ಯತ್ನಕ್ಕೆ ಶಾಲೆಯ ಕಿರುಕುಳವೇ ನಿಖರ ಕಾರಣವೇ? ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಕುರಿತು ಸಮಗ್ರ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ

ಈ ಸಂಬಂಧ ವಿದ್ಯಾರ್ಥಿಯ ಪೋಷಕರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಶಾಲಾ ಆಡಳಿತ ಮಂಡಳಿ ಮತ್ತು ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.