Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು : ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಚುರುಕಾಗಲಿದ್ದು, ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಜಿಲ್ಲಾವಾರು ಮುನ್ಸೂಚನೆ ಹಾಗೂ ಗಾಳಿಯ ವೇಗದ ಎಚ್ಚರಿಕೆಯನ್ನು ನೀಡಿದೆ.

Out Look Fashion

ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯಲ್ಲಿ ಸಾಪೇಕ್ಷ ಆರ್ದ್ರತೆ ಗರಿಷ್ಠ ಮಟ್ಟದಲ್ಲಿರಲಿದೆ. ಇದರಿಂದಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ಕೊಂಚ ಇಳಿಕೆಯಾಗಲಿದ್ದು, ತಂಪಾದ ಗಾಳಿ ಬೀಸಲಿದೆ.

Jaya Refrigeration and Air Condition

ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿದ್ದು, ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಕರಾವಳಿ ಭಾಗದ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿಯಲಿದ್ದು, ಬಯಲು ಸೀಮೆ ಜಿಲ್ಲೆಗಳಲ್ಲಿ ಭಾರಿ ವೇಗದ ಗಾಳಿ ಬೀಸಲಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂಗಾರು ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಗಡಿ ಭಾಗದ ಕೆಳಗಿನ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸಲಿದೆ ಹಾಗೂ ವಾತಾವರಣದಲ್ಲಿ ಸ್ವಲ್ಒ ಬದಲಾವಣೆ ಆಗಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸದ್ಯ ಮೋಡ ಕವಿದ ವಾತಾವರಣ ಇರಲಿದ್ದು, ತಾಪಮಾನದಲ್ಲಿ ತಂಪಾದ ಏರಿಳಿತ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಒಣಹವೆ ಇದ್ದರೂ ಸಂಜೆ ಅಥವಾ ರಾತ್ರಿ ವೇಳೆಗೆ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 3 ರಿಂದ 5 ದಿನಗಳ ಕಾಲ ಬಿರುಗಾಳಿಯ ತೀವ್ರತೆ ಹೆಚ್ಚಿರುವುದರಿಂದ ಬೆಳೆಗಳು ಹಾಗೂ ಬಾಳೆ, ಅಡಿಕೆ ಬೆಳೆಗಾರರು ಮುನ್ನೆಚ್ಚರಿಕೆ ವಹಿಸಬೇಕು. ಗಾಳಿಯ ದಿಕ್ಕು ಪಶ್ಚಿಮ ಹಾಗೂ ನೈಋತ್ಯ ದಿಕ್ಕಿನಿಂದ ಇರಲಿದ್ದು, ತೇವಾಂಶದ ಪ್ರಮಾಣ ಹೆಚ್ಚಿರಲಿದೆ.