



ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಏನೆಕಲ್ಲು ಗ್ರಾಮದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಜುಲೈ 7ರಂದು ತನ್ನ ಸ್ನೇಹಿತೆಯ ಮನೆಗೆ ತೆರಳಿದ್ದಳು. ಜುಲೈ 8ರಂದು ಮಧ್ಯಾಹ್ನ, ಕಲ್ಲಾಜೆ ದೇವನಹಳ್ಳಿ ನಿವಾಸಿ ಮೋಕ್ಷಿತ್ ಎಂಬಾತ ವಿದ್ಯಾರ್ಥಿನಿಯನ್ನು ಮನೆ ಸಮೀಪಕ್ಕೆ ಕರೆದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯ ಬಗ್ಗೆ ಯಾರಿಗೂ ತಿಳಿಸದಂತೆ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಳಿಕ ಜುಲೈ 9ರಂದು ವಿದ್ಯಾರ್ಥಿನಿ ಮನೆಗೆ ಮರಳಿದ ನಂತರ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 65(1), 35(2) ಹಾಗೂ ಪೊಕ್ಸೋ (POCSO) ಕಾಯ್ದೆಯ ಕಲಂ 4ರಡಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
