Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರ ಬಂದ್ ಆಗಿದೆ.

Out Look Fashion

ಸಾಣೆಕಟ್ಟ ತದಡಿ ಸಾಗುವ ಮಾರ್ಗದಲ್ಲಿ ರಸ್ತೆ ಮೇಲೆ ಧರೆ ಕುಸಿತವಾಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಗಳಾಗಿಲ್ಲ. ದೊಡ್ಡ ಪ್ರಮಾಣದಲ್ಲಿ ಮಣ್ಣು ರಸ್ತೆ ಮೇಲೆ ಕುಸಿತವಾಗಿದ್ದು, ಇದರಿಂದ ಈ ಭಾಗದ ಸಂಚಾರವೇ ಸಂಪೂರ್ಣ ಬಂದ್ ಆಗಿದೆ.

Jaya Refrigeration and Air Condition

ಸ್ಥಳಕ್ಕೆ ಗೋಕರ್ಣ ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಿನ್ನೆಯಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಅಬ್ಬರದ ಮಳೆ ಸುರಿಯುತ್ತಿದೆ. ಹೀಗಾಗಿ, ಈ ಅವಘಡ ಸಂಭವಿಸಿದೆ.