Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಕೇವಲ ಐದು ದಿನಗಳಲ್ಲಿ ಭೇದಿಸಿರುವ ಬರ್ಕೆ ಪೊಲೀಸರು, ನೇಪಾಳ ಮೂಲದ ಮೂವರು ಕುಖ್ಯಾತ ಅಂತಾರಾಷ್ಟ್ರೀಯ ಮನೆಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Out Look Fashion

ಜುಲೈ 11ರಂದು ಉರ್ವ ಮಾರ್ಕೆಟ್ ಸಮೀಪದ ಮಠದಕಣಿಯ ಮನೆಯಲ್ಲಿ ನಡೆದ ಕಳ್ಳತನದಲ್ಲಿ ಸುಮಾರು 64 ಗ್ರಾಂ ಚಿನ್ನಾಭರಣ, ₹25 ಸಾವಿರ ನಗದು ಸೇರಿದಂತೆ ₹8.57 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Jaya Refrigeration and Air Condition

ತನಿಖೆ ಕೈಗೊಂಡ ಪೊಲೀಸರು ಜುಲೈ 17ರ ಮುಂಜಾನೆ ಬೋಳೂರಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಚಿನ್ನಾಭರಣಗಳ ಜೊತೆಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಕಳವು ಮಾಡಿದ್ದ ಸುಮಾರು 790 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ಸುಮಾರು ₹10 ಲಕ್ಷ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರು ಈ ಹಿಂದೆ ಮಂಗಳೂರಿನ ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನಕ್ಕೆ ಯತ್ನಿಸಿದ್ದಲ್ಲದೆ, ಬೆಂಗಳೂರು, ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 15ಕ್ಕೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ತಮಿಳುನಾಡು, ದೆಹಲಿ ಹಾಗೂ ಹರಿಯಾಣ ರಾಜ್ಯಗಳಲ್ಲಿಯೂ ಇವರ ವಿರುದ್ಧ ಪ್ರಕರಣಗಳಿರುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಈ ಯಶಸ್ವಿ ಕಾರ್ಯಾಚರಣೆಯನ್ನು ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಡೆಸಿದ್ದಾರೆ.