




ಬಂಟ್ವಾಳ: ಬಿ.ಸಿ.ರೋಡ್‌ನಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಪರವಾಗಿ ಯಾವುದೇ ನ್ಯಾಯವಾದಿಗಳು ವಕಾಲತ್ತು ವಹಿಸದಂತೆ ಕೋರಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬಂಟ್ವಾಳ ವಕೀಲರ ಸಂಘಕ್ಕೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ, ಲಾವಣ್ಯ ಹತ್ಯೆ ಅತ್ಯಂತ ಕ್ರೂರ ಮತ್ತು ಅಮಾನವೀಯ ಕೃತ್ಯವಾಗಿದ್ದು, ಸಮಾಜದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಉಲ್ಲೇಖಿಸಲಾಗಿದೆ. ಇಂತಹ ಕೃತ್ಯ ಎಸಗಿದ ಆರೋಪಿಯ ಪರವಾಗಿ ವಕಾಲತ್ತು ವಹಿಸದಂತೆ ಸಂಘದ ನ್ಯಾಯವಾದಿಗಳಿಗೆ ಮನವಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್, ಬಜರಂಗದಳ ಬಂಟ್ವಾಳ ಪ್ರಖಂಡದ ಪದಾಧಿಕಾರಿಗಳು ಹಾಗೂ ಪುತ್ತೂರು ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.
