Akshaya Sharadhotsava
Darbe Salon
Mahalingeshwara Car Air Condition
New Dot Dress Mart

ವಿಟ್ಲ: ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವೊಂದು ದೊರೆತಿದೆ. ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ ಒಟ್ಟು 9 ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Out Look Fashion
Screenshot

ಸಂಘದ ನೇಮಕಾತಿ ಉಪಸಮಿತಿಯ ಆದೇಶದಂತೆ ಪ್ರಕಟಣೆ ಹೊರಡಿಸಲಾಗಿದ್ದು, ದ್ವಿತೀಯ ದರ್ಜೆ ಸಹಾಯಕ 6 ಹುದ್ದೆಗಳು ಹಾಗೂ ಜವಾನ 3 ಹುದ್ದೆಗಳು ಭರ್ತಿಯಾಗಲಿವೆ.

Jaya Refrigeration and Air Condition

ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ, ಕನ್ನಡ ಭಾಷೆಯ ಜ್ಞಾನ ಹಾಗೂ ಕಂಪ್ಯೂಟರ್ ಡಿಪ್ಲೊಮಾ ಅಥವಾ ಕಂಪ್ಯೂಟರ್ ಅಪ್ಲಿಕೇಶನ್ ಜ್ಞಾನ ಕಡ್ಡಾಯವಾಗಿದೆ. ಈ ಹುದ್ದೆಗೆ ₹34,100 ರಿಂದ ₹67,600 ವೇತನ ನಿಗದಿಯಾಗಿದೆ.

ಜವಾನ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಈ ಹುದ್ದೆಗೆ ₹27,000 ರಿಂದ ₹46,675 ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿಯಾಗಿದೆ. ಸಂಘದ ಕಾರ್ಯವ್ಯಾಪ್ತಿಯ ವ್ಯಾಪ್ತಿಯ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಸಂಘದ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಅಗತ್ಯ ದಾಖಲೆಗಳು ಹಾಗೂ ಅರ್ಜಿ ಶುಲ್ಕದ ಚಲನ್ ಪ್ರತಿಯೊಂದಿಗೆ ಜುಲೈ 27, 2026ರ ಸೋಮವಾರ ಸಂಜೆ 4 ಗಂಟೆಯೊಳಗೆ ವಿಟ್ಲದ ಪ್ರಧಾನ ಕಚೇರಿ ಅಥವಾ ಶಾಖಾ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಘದ ವೆಬ್‌ಸೈಟ್ ಅಥವಾ ಕಚೇರಿಯನ್ನು ಸಂಪರ್ಕಿಸಬಹುದು.