



ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ಖಾಸಗಿ ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿ ಹಣ್ಣಿನ ಹಾಗೂ ಔಷಧೀಯ ಗಿಡಗಳನ್ನು ನಾಶಪಡಿಸಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಳಿನೆಲೆ ಗ್ರಾಮದ ಗೋಪಾಳಿ ನಿವಾಸಿ ಹರಿಪ್ರಸಾದ್ ಜಿ. ವಿರುದ್ಧ ಪ್ರಕರಣ ದಾಖಲಾಗಿದ್ದು, ಅದೇ ಗ್ರಾಮದ ರುಕ್ಕಿಣಿ ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ದೂರಿನ ಪ್ರಕಾರ, ಜುಲೈ 19ರಂದು ಆರೋಪಿಯು ಅಕ್ರಮವಾಗಿ ಜಮೀನಿಗೆ ಪ್ರವೇಶಿಸಿ, ಹುಲ್ಲು ಕತ್ತರಿಸುವ ಯಂತ್ರದ ಮೂಲಕ ಜಮೀನಿನಲ್ಲಿದ್ದ ಹಲಸಿನ ಗಿಡ, ಮಾವಿನ ಗಿಡ ಸೇರಿದಂತೆ ಹಲವು ಔಷಧೀಯ ಗಿಡಗಳನ್ನು ಕತ್ತರಿಸಿ ನಾಶಪಡಿಸಿದ್ದಾನೆ ಎನ್ನಲಾಗಿದೆ.
ಈ ಘಟನೆಯಿಂದ ಸುಮಾರು ₹5 ಸಾವಿರಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ರುಕ್ಕಿಣಿ ನೀಡಿದ ದೂರಿನ ಆಧಾರದ ಮೇಲೆ ಕಡಬ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS)–2023ರ ಕಲಂ 324(3) ಹಾಗೂ 329(4) ಅಡಿಯಲ್ಲಿ ಅಪರಾಧ ಸಂಖ್ಯೆ 93/2026 ದಾಖಲಿಸಿಕೊಂಡಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ನಡೆಸುತ್ತಿದ್ದಾರೆ.
