



ಸುಳ್ಯ: ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.


ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.100/2026ರಡಿ ಕಲಂ 85, 103(1) ಹಾಗೂ 3(5) ಬಿಎನ್‌ಎಸ್-2023ರ ಅನ್ವಯ ದಾಖಲಾಗಿದ್ದ ಪ್ರಕರಣದಲ್ಲಿ, ಮೃತ ಮಹಿಳೆಯ ಮಾವ ಸಿ.ಪಿ. ಅಳವಿ (54), ಅತ್ತೆ ಅಯಿಷಾ ಸಿ.ಎ. ಮತ್ತು ನಾದಿನಿ ಫಸಿಲಾ ಸಿ.ಎ. (29) ಅವರನ್ನು ಜುಲೈ 22ರಂದು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಪ್ರಸ್ತುತ ಆರೋಪಿಗಳನ್ನು ಸುಳ್ಯ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಪ್ರಕರಣದ ತನಿಖೆಯನ್ನು ಸುಳ್ಯ ಪೊಲೀಸರು ಮುಂದುವರಿಸಿದ್ದಾರೆ.
