




ಮಂಗಳೂರು, ಜು. 24: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮ ಕಾಲೇಜುಗಳಿಗೆ ಇಂದು (ಜುಲೈ 24) ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಪೋಷಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಸಂಚಾರ ಮಾಡದಂತೆ ಮತ್ತು ಮಳೆ ಸಂಬಂಧಿತ ಎಚ್ಚರಿಕೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ನದಿಗಳು, ತಗ್ಗು ಪ್ರದೇಶಗಳು ಹಾಗೂ ಸಮುದ್ರ ತೀರದ ಭಾಗಗಳಲ್ಲಿ ವಾಸಿಸುವವರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಮಳೆಯ ಪರಿಸ್ಥಿತಿಯನ್ನು ಜಿಲ್ಲಾಡಳಿತ ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
