Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಬಂಧಿಸಿದ್ದಾರೆ.

Out Look Fashion

ಸುಳ್ಯ ನಿವಾಸಿಯ ಅಪ್ರಾಪ್ತ ಮಗಳು ಮೇ 7ರಂದು ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದಳು. ಬಳಿಕ ಮನೆಗೆ ಮರಳದ ಹಿನ್ನೆಲೆಯಲ್ಲಿ, ಮೇ 11ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಪ್ರಕರಣ ದಾಖಲಾಗಿತ್ತು.

Jaya Refrigeration and Air Condition

ಪ್ರಕರಣದ ತನಿಖೆ ಮುಂದುವರಿದ ವೇಳೆ, ಜುಲೈ 22ರಂದು ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿದರು. ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ, ಕಡಬ ನಿವಾಸಿ ಧನುಷ್ (18) ಎಂಬಾತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಕಲಂಗಳು ಹಾಗೂ ಪೊಕ್ಸೊ ಕಾಯ್ದೆಯಡಿ ಹೆಚ್ಚುವರಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಜುಲೈ 22ರಂದು ಬಂಧಿಸಲಾಗಿದೆ.

ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.