Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ಕೇಂದ್ರ ಸರ್ಕಾರದ ವಿರುದ್ಧ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬಂಧನವನ್ನು ವಿರೋಧಿಸಿ, ಪುತ್ತೂರಿನ ಗಾಂಧಿಕಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Out Look Fashion

ಪುತ್ತೂರು, ಉಪ್ಪಿನಂಗಡಿ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಸಮಿತಿಗಳು, ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ಕ್ರಮಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

Jaya Refrigeration and Air Condition

ಪ್ರತಿಭಟನಾಕಾರರು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ರಾಹುಲ್ ಗಾಂಧಿಯವರ ಬಂಧನವನ್ನು ರಾಜಕೀಯ ದ್ವೇಷದ ಕ್ರಮ ಎಂದು ಆರೋಪಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಹಲವರು ಭಾಗವಹಿಸಿದ್ದರು