




10 ವರ್ಷಗಳ ಹಿಂದಿನ ಕಳವು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ.

2016ರ ಕಳವು ಪ್ರಕರಣದ ಆರೋಪಿಯಾಗಿದ್ದ ಬಿಹಾರದ ವೈಶಾಲಿ ನಿವಾಸಿ 48 ವರ್ಷದ ಸಂಜಯ್ ಸಹಾನಿಯನ್ನು ಬಂಧಿಸಿ, ಜುಲೈ 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ದಂಡ ವಿಧಿಸಿ, ಪ್ರಕರಣವನ್ನು ಮುಕ್ತಾಯಗೊಳಿಸಿದೆ.
