Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ನಗರದ ಹಂಪನಕಟ್ಟೆ ಪ್ರದೇಶದಲ್ಲಿರುವ ಶೂ ಅಂಗಡಿಯೊಂದಕ್ಕೆ ಮಂಗಳವಾರ ಬೆಳಗ್ಗೆ ಭೀಕರ ಬೆಂಕಿ ತಗುಲಿದ್ದು, ಅಂಗಡಿ ಸಂಪೂರ್ಣ ಸುಟ್ಟು ಭಸ್ಮಗೊಂಡಿದೆ.

Out Look Fashion

‘ಯುರೋಪ್’ ಹೆಸರಿನ ಶೂ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ವ್ಯಾಪಿಸಿ, ಪಕ್ಕದ ಎರಡು ಅಂಗಡಿಗಳಿಗೂ ಹರಡಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Jaya Refrigeration and Air Condition

ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯಿಂದ ಅಂಗಡಿಯಲ್ಲಿದ್ದ ಶೂಗಳು, ಪೀಠೋಪಕರಣಗಳು ಹಾಗೂ ಇತರೆ ವಸ್ತುಗಳು ಸುಟ್ಟು ಅಪಾರ ಪ್ರಮಾಣದ ಆಸ್ತಿ ನಷ್ಟ ಸಂಭವಿಸಿದೆ.

ಬೆಂಕಿಯ ನಿಖರ ಕಾರಣ ಹಾಗೂ ನಷ್ಟದ ಪ್ರಮಾಣವನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.