Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದರು.

Out Look Fashion

ಈ ಸಮಸ್ಯೆಯ ಕುರಿತು ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳ ಪರಿಶೀಲನೆ ನಡೆಸಿ, ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ಅಧಿಕಾರಿಗಳಿಗೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

Jaya Refrigeration and Air Condition

ಅದರಂತೆ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ವೆಟ್ ಮಿಕ್ಸ್ ಅಳವಡಿಸಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಇದರಿಂದ ವಾಹನಗಳ ಸಂಚಾರ ಮತ್ತೆ ಸುಗಮವಾಗಿದ್ದು, ಸಾರ್ವಜನಿಕರಿಗೆ ತಾತ್ಕಾಲಿಕ ನೆಮ್ಮದಿ ದೊರೆತಿದೆ.

ಇದೇ ವೇಳೆ, ಈ ರಸ್ತೆಯ ಶಾಶ್ವತ ದುರಸ್ತಿ ಕಾಮಗಾರಿಯನ್ನೂ ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಉತ್ತಮ ರಸ್ತೆ ವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಸಂಬಂಧಿತ ಅಧಿಕಾರಿಗಳು ತಿಳಿಸಿದ್ದಾರೆ.