




ಬೆಳಗಾವಿ: ಪಶ್ಚಿಮ ಘಟ್ಟ (Western Ghats) ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬೆಳಗಾವಿ ತಾಲ್ಲೂಕಿನ ರಕ್ಕಸಕೊಪ್ಪ ಜಲಾಶಯ (Rakkasakoppa Dam) ಸಂಪೂರ್ಣ ಭರ್ತಿಯಾಗಿದೆ.

ಹೌದು. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರಿಂದ ಬೆಳಗಾವಿ ಮಹಾನಗರದ (Belagavi City) ಜನರು ನಿಟ್ಟುಸಿರು ಬಿಡುವಂತಾಗಿದ್ದು, ಮುಂದಿನ 1 ವರ್ಷದವರೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇಲ್ಲ ಎಂಬ ವಿಶ್ವಾಸ ಮೂಡಿದೆ.

ಮಾರ್ಕಂಡೇಯ ನದಿಗೆ ಅಡ್ಡಲಾಗಿ ನಿರ್ಮಿಸಲಾದ ರಕ್ಕಸಕೊಪ್ಪ ಜಲಾಶಯವು ಸುಮಾರು ಅರ್ಧ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಜಲಾಶಯ ಭರ್ತಿಯಾಗಿರುವುದರಿಂದ ಬೆಳಗಾವಿ ನಗರಕ್ಕೆ ನಿರಂತರವಾಗಿ ಕುಡಿಯುವ ನೀರು (Drinking Water) ಪೂರೈಸಲು ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಿದೆ.
