Akshaya Sharadhotsava
Darbe Salon
Mahalingeshwara Car Air Condition
New Dot Dress Mart

ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

Out Look Fashion

ಎಸ್‌ಐಟಿ ನಡೆಸಿದ ತನಿಖೆಯಲ್ಲಿ ಪತ್ತೆಯಾಗಿದ್ದ ಏಳು ಅಸ್ಥಿಪಂಜರಗಳ ಪೈಕಿ ಮೂವರ ಗುರುತನ್ನು ಡಿಎನ್‌ಎ ಪರೀಕ್ಷೆಯ ಮೂಲಕ ದೃಢಪಡಿಸಲಾಗಿದೆ. ಈ ಕುರಿತು ಎಸ್‌ಐಟಿ ತಂಡ ಜುಲೈ 15ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ.

Jaya Refrigeration and Air Condition

ಡಿಎನ್‌ಎ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯ ಯು.ಬಿ. ಅಯ್ಯಪ್ಪ, ತುಮಕೂರಿನ ಆದಿಶೇಷ ನಾರಾಯಣ ಹಾಗೂ ಕೋಲಾರ ಜಿಲ್ಲೆಯ ಕೃಷ್ಣಪ್ಪ ಅವರ ಅಸ್ಥಿಪಂಜರಗಳೆಂದು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿದೆ.

2025ರ ಸೆಪ್ಟೆಂಬರ್ 17 ಮತ್ತು 18ರಂದು ಧರ್ಮಸ್ಥಳದ ನೇತ್ರಾವತಿ ನದಿ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಒಟ್ಟು ಏಳು ಅಸ್ಥಿಪಂಜರಗಳು ಪತ್ತೆಯಾಗಿದ್ದವು.

ಸ್ಥಳದಲ್ಲಿ ದೊರೆತಿದ್ದ ಕೆಲವು ಗುರುತಿನ ಚೀಟಿಗಳ ಆಧಾರದ ಮೇಲೆ ಸಂಬಂಧಿಕರನ್ನು ಪತ್ತೆಹಚ್ಚಿ, ನ್ಯಾಯಾಲಯದ ಅನುಮತಿಯೊಂದಿಗೆ ಕುಟುಂಬ ಸದಸ್ಯರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಡಿಎನ್‌ಎ ಪರೀಕ್ಷೆ ನಡೆಸಲಾಗಿತ್ತು.

ಡಿಎನ್‌ಎ ಮೂಲಕ ಗುರುತಿಸಲ್ಪಟ್ಟವರಲ್ಲಿ, 2017ರಿಂದ ನಾಪತ್ತೆಯಾಗಿದ್ದ ಕೊಡಗಿನ ಯು.ಬಿ. ಅಯ್ಯಪ್ಪ, 2013ರಿಂದ ನಾಪತ್ತೆಯಾಗಿದ್ದ ತುಮಕೂರಿನ ಆದಿಶೇಷ ನಾರಾಯಣ ಹಾಗೂ 2024ರಲ್ಲಿ ನಾಪತ್ತೆಯಾಗಿದ್ದ ಕೋಲಾರದ ಕೃಷ್ಣಪ್ಪ ಸೇರಿದ್ದಾರೆ.

ಮೃತರ ಕುಟುಂಬಸ್ಥರು ಎಸ್‌ಐಟಿಗೆ ಮನವಿ ಸಲ್ಲಿಸಿದಲ್ಲಿ ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಅಸ್ಥಿಪಂಜರಗಳನ್ನು ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.

ಉಳಿದ ನಾಲ್ಕು ಅಸ್ಥಿಪಂಜರಗಳ ಗುರುತು ಪತ್ತೆ ಹಾಗೂ ಪ್ರಕರಣದ ಇತರೆ ಆಯಾಮಗಳ ಕುರಿತು ಎಸ್‌ಐಟಿ ತನಿಖೆ ಮುಂದುವರಿದಿದ್ದು, ಇನ್ನಷ್ಟು ಮಾಹಿತಿ ಹೊರಬರುವ ನಿರೀಕ್ಷೆಯಿದೆ.