Akshaya Sharadhotsava
Darbe Salon
Mahalingeshwara Car Air Condition
New Dot Dress Mart

ವಿಟ್ಲ: ಕಳೆದ ಮೂರು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ವಿಟ್ಲ ಪಡೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75) ಅವರು ಇಂದು ಬೆಳಿಗ್ಗೆ ಅಡಿಕೆ ತೋಟದ ಚರಂಡಿಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಮಯೋಚಿತ ರಕ್ಷಣೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Out Look Fashion

ಮಂಗಳವಾರ ಗಿರಿಯಪ್ಪ ಅವರು ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಅಗ್ನಿಶಾಮಕ ದಳ ಕೆರೆ ಹಾಗೂ ಹಳ್ಳಗಳಲ್ಲಿ ಶೋಧ ಕಾರ್ಯ ನಡೆಸಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ.

Jaya Refrigeration and Air Condition
Screenshot

ಇಂದು ಬೆಳಿಗ್ಗೆ ಸಂಬಂಧಿಕರು, ಕೋಡಪದವು ಮಾರುತಿ ಫ್ರೆಂಡ್ಸ್ ಹಾಗೂ ಸಾರ್ವಜನಿಕರು ವ್ಯಾಪಕ ಶೋಧ ಕಾರ್ಯ ಆರಂಭಿಸಿದರು. ಮನೋಹರ, ಜಿಲ್ಲಾ ಬಿಜೆಪಿ ವಕ್ತಾರ ಮಾಧವ ಮಾವೆ, ಮಾಣಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರವಿಂದ ರೈ, ರೈತ ಮೋರ್ಚಾ ಅಧ್ಯಕ್ಷ ಉಮೇಶ್ ಶೆಟ್ಟಿ, ಸೀತಾರಾಮ ಗೌಡ, ಮುರಳಿ ಭಟ್ ಹಾಗೂ ಮನೋಹರ ಕುಕ್ಕಿಲ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಶೋಧದ ವೇಳೆ ಕುಕ್ಕಿಲದ ಅಡಿಕೆ ತೋಟದ ನೀರು ಹರಿಯುವ ಚರಂಡಿಯಲ್ಲಿ ಗಿರಿಯಪ್ಪ ಅವರು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿತು. ಸ್ಥಳೀಯರು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಆಪದ್ಬಾಂಧವ ಮುರಳಿ ವಿಟ್ಲ ಅವರಿಗೆ ಮಾಹಿತಿ ನೀಡಿದರು.

ಬಳಿಕ ಅಂಬ್ಯುಲೆನ್ಸ್ ಮೂಲಕ ಅವರನ್ನು ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದು, ಪ್ರಸ್ತುತ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.