




ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ನೆಕ್ಕರೆ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇಂದು ದಿನವಿಡೀ ಎಡೆಬಿಡದೆ ಸುರಿದ ಮಳೆಯ ಪರಿಣಾಮ ರಾತ್ರಿ ಸುಮಾರು 10 ಗಂಟೆ ವೇಳೆಗೆ ಬಲ್ನಾಡು ಗ್ರಾಮದ ನೆಕ್ಕರೆ ಭಾಗದಲ್ಲಿ ಗುಡ್ಡ ಕುಸಿದು ರಸ್ತೆಯ ಮೇಲೆ ಮಣ್ಣು ಜಾರಿಬಿದ್ದಿದೆ.


ಗುಡ್ಡದಿಂದ ಬಿದ್ದ ಮಣ್ಣಿನ ರಾಶಿಯಿಂದ ರಸ್ತೆಯಲ್ಲಿ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಅದೃಷ್ಟವಶಾತ್ ಘಟನೆ ನಡೆದ ವೇಳೆ ರಸ್ತೆಯಲ್ಲಿ ಯಾವುದೇ ವಾಹನ ಅಥವಾ ಸಾರ್ವಜನಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ.
