Akshaya Sharadhotsava
Darbe Salon
Mahalingeshwara Car Air Condition
New Dot Dress Mart

ದಕ್ಷಿಣ ಕನ್ನಡ ಜಿಲ್ಲೆಯ ಪುದುವೆಟ್ಟಿನಲ್ಲಿ ಹಿಂದೂ ಸೇವಾ ಸಮಿತಿ ವತಿಯಿಂದ ಶ್ರೀ ಓಂ ಶಕ್ತಿ ಭಜನಾ ಮಂದಿರದಲ್ಲಿ ಲೋಕ ಕಲ್ಯಾಣಾರ್ಥವಾಗಿ 108 ತೆಂಗಿನಕಾಯಿ ಗಣಹೋಮ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.

Out Look Fashion

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭಾಗವಹಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

Jaya Refrigeration and Air Condition

ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ ಗೌಡ, ಶಕ್ತಿ ಕೇಂದ್ರ ಪ್ರಮುಖ ಪೂರ್ಣಾಕ್ಷ ಬಾಯಿತ್ಯಾರು, ಓಂ ಶಕ್ತಿ ಭಜನಾ ಮಂದಿರದ ಅಧ್ಯಕ್ಷ ಚೇತನ್ ಮುಚ್ಚಾರು, ಮೀಯಾರು ಶ್ರೀ ವನದುರ್ಗ ದೇವಸ್ಥಾನದ ಮಾಜಿ ಅಧ್ಯಕ್ಷ ನಿತ್ಯಾನಂದ ಗೌಡ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಜನಪ್ರತಿನಿಧಿಗಳು, ಸಮಿತಿ ಪದಾಧಿಕಾರಿಗಳು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

ಲೋಕದ ಶಾಂತಿ, ಸಮೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಆಯೋಜಿಸಲಾದ ಈ ಧಾರ್ಮಿಕ ಕಾರ್ಯಕ್ರಮ ಭಕ್ತಿಭಾವದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.