Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಹಾಸನ: ಪರಿಭಾವಿತ ಅರಣ್ಯ (ಡೀಮ್ಡ್ ಫಾರೆಸ್ಟ್‌) ಪ್ರದೇಶಕ್ಕೆ ಅಕ್ರಮವಾಗಿ ನುಗ್ಗಿ ಏಳು ಮಹೀಂದ್ರ ಥಾರ್‌(Mahindra Thar) ಜೀಪ್‌ಗಳಲ್ಲಿ ಆಫ್ ರೋಡ್(Off-Roading) ಸಾಹಸ ನಡೆಸುತ್ತಿದ್ದ ಬೆಂಗಳೂರಿನ (Bengaluru) ಪ್ರವಾಸಿಗರ ತಂಡದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದು, ಏಳು ಜೀಪ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

Out Look Fashion

ಬೆಂಗಳೂರಿನಿಂದ ಆಗಮಿಸಿದ್ದ ಪ್ರವಾಸಿಗರ ತಂಡವು ಹೊಡಚಳ್ಳಿ ಗ್ರಾಮದ ಸರ್ವೆ ಸಂಖ್ಯೆ 20, 21 ಹಾಗೂ 28ರ ವ್ಯಾಪ್ತಿಯಲ್ಲಿ ಬರುವ ಪರಿಭಾವಿತ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶ ಪಡೆದಿತ್ತು. ಅಲ್ಲಿ ಜೀಪ್‌ಗಳನ್ನು ಓಡಿಸುವ ಮೂಲಕ ಅರಣ್ಯ, ಪರಿಸರ ಹಾಗೂ ವನ್ಯಜೀವಿಗಳಿಗೆ ತೀವ್ರ ಹಾನಿ ಉಂಟುಮಾಡುತ್ತಿದ್ದರು.

Jaya Refrigeration and Air Condition

ಈ ಕುರಿತು ಖಚಿತ ಮಾಹಿತಿ ಲಭಿಸುತ್ತಿದ್ದಂತೆ ಸಕಲೇಶಪುರ ವಲಯ ಅರಣ್ಯಾಧಿಕಾರಿ ನೇತೃತ್ವದ ಅಧಿಕಾರಿಗಳಾದ ಮಂಜುನಾಥ್, ಅರ್ಜುನ್ ಹಾಗೂ ಮಹದೇವಪ್ಪ ಅವರ ತಂಡ ದಾಳಿ ನಡೆಸಿದೆ.