Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಗೂ 30ಕ್ಕೂ ಹೆಚ್ಚು ನ್ಯಾಯಾಲಯದ ವಾರಂಟ್‌ಗಳನ್ನು ಎದುರಿಸುತ್ತಿದ್ದ ವಾರಂಟ್ ಆರೋಪಿ ಉಮ್ಮರ್ ನವಾಫ್‌ನನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ತಂಡ ಬಂಧಿಸಿದೆ.

Out Look Fashion

33 ವರ್ಷದ ಉಮ್ಮರ್ ನವಾಫ್, ಅಬ್ದುಲ್ ಖಾದರ್ ಅವರ ಪುತ್ರ. ಮೂಲತಃ ಉಳ್ಳಾಲ ತಾಲೂಕಿನ ಮಾರ್ಗತಲೆ ನಿವಾಸಿಯಾಗಿದ್ದು, ಪ್ರಸ್ತುತ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಗೇರುಕಟ್ಟೆಯ ನಾಜಿಯಾ ಮಂಜೀಲ್‌ನಲ್ಲಿ ವಾಸವಾಗಿದ್ದ ಎನ್ನಲಾಗಿದೆ.

Jaya Refrigeration and Air Condition

ಆರೋಪಿಯ ವಿರುದ್ಧ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ದರೋಡೆ, ಅಪಹರಣ, ಸುಲಿಗೆ, ಅಕ್ರಮ ಪ್ರವೇಶ, ಸರ್ಕಾರಿ ಆಸ್ತಿ ಹಾನಿ ಸೇರಿದಂತೆ 13ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಿನ್ನೆಲೆ, ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್‌ಗಳನ್ನು ಹಾಗೂ ಕೆಲವು ಪ್ರಕರಣಗಳಲ್ಲಿ ಪ್ರೋಕ್ಲಮೇಶನ್ ಮತ್ತು ಎಲ್‌ಪಿಸಿ ಆದೇಶಗಳನ್ನು ಹೊರಡಿಸಿತ್ತು.

ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ವಿಶೇಷ ಕರ್ತವ್ಯ ತಂಡ, ಆಗಸ್ಟ್ 2ರಂದು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.