Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು, ಆ.6: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.

Out Look Fashion
Screenshot

ಸುಳ್ಯ ತಾಲೂಕಿನ ಕಲ್ಲುಮುಟ್ಟು ನಿವಾಸಿ ಉಮರ್ ಫಾರೂಕ್ ಬಂಧಿತ ಆರೋಪಿ. ಈತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪಟ್ಟಿಯಲ್ಲಿದ್ದು, ಮಾಹಿತಿ ನೀಡಿದವರಿಗೆ ಎನ್‌ಐಎ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

Jaya Refrigeration and Air Condition

2022ರ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯಲ್ಲಿ, ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಹಿಂದು ನಾಯಕರ ಹತ್ಯೆ ಸಂಚಿನ ಭಾಗವಾಗಿ ಕೃತ್ಯ ಎಸಗಿದ್ದರು ಎಂದು ಎನ್‌ಐಎ ಆರೋಪಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ 20ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು, ಕೆಲವರು ತಲೆಮರೆಸಿಕೊಂಡಿದ್ದರು.

ಇತ್ತೀಚೆಗೆ ಜುಲೈ 11ರಂದು ಬಂಧಿತ ಆರೋಪಿಗಳಾದ ನೌಷದ್ ಹಾಗೂ ನಾಸೀರ್ ಅವರ ವಿಚಾರಣೆ ವೇಳೆ ಲಭಿಸಿದ ಮಾಹಿತಿಯ ಆಧಾರದಲ್ಲಿ, ಕೊಚ್ಚಿಯಲ್ಲಿ ಅಡಗಿ ವಾಸಿಸುತ್ತಿದ್ದ ಉಮರ್ ಫಾರೂಕ್‌ನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣದ 13ನೇ ಆರೋಪಿಯಾಗಿ ಗುರುತಿಸಲ್ಪಟ್ಟಿರುವ ಉಮರ್ ಫಾರೂಕ್, ಪ್ರಮುಖ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ನೆರವು ನೀಡಿದ್ದಾನೆ ಎಂಬ ಆರೋಪವಿದೆ. ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆತ, ಕೊಚ್ಚಿಯಲ್ಲಿ ನೆಲೆಸಿ ಉದ್ಯೋಗದಲ್ಲಿದ್ದ ಎನ್ನುವ ಮಾಹಿತಿ ತನಿಖೆಯಿಂದ ಬೆಳಕಿಗೆ ಬಂದಿದೆ. ಇದೀಗ ಬಂಧಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿರುವ ಎನ್‌ಐಎ, ಪ್ರಕರಣದ ತನಿಖೆಯನ್ನು ಮುಂದುವರಿಸಿದೆ.