Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಉಡುಪಿ: ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ ಹಾಡಹಗಲೇ ನಡೆದ ಉದ್ಯಮಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

Out Look Fashion
Screenshot

ಮುದರಂಗಡಿ ಚರ್ಚ್ ಎದುರು ಶುಕ್ರವಾರ ಮಧ್ಯಾಹ್ನ ಸುಮಾರು 3.50ರ ವೇಳೆಗೆ ಡೇವಿಡ್ ಡಿಸೋಜ ಎಂಬ ಉದ್ಯಮಿಯನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದರು. ವಾಹನ ಏರಲು ಮುಂದಾಗುತ್ತಿದ್ದ ವೇಳೆ ಡೇವಿಡ್ ಅವರ ಮೇಲೆ ದಾಳಿ ನಡೆಸಲಾಗಿತ್ತು.

Jaya Refrigeration and Air Condition

ಘಟನೆ ಬಳಿಕ ಕಾರ್ಯಾಚರಣೆಗಿಳಿದ ಪೊಲೀಸರು ರಾಜು ಎಂಬಾತನನ್ನು ಪ್ರಮುಖ ಆರೋಪಿಯಾಗಿ ಬಂಧಿಸಿದ್ದಾರೆ. ಆದರೆ ಬಂಧನದ ಬಳಿಕ ಬೈಂದೂರು ಸಮೀಪದ ಒತ್ತಿನೆಣೆ ಬಳಿ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಈ ವೇಳೆ ಕಾಪು ಪಿಎಸ್‌ಐ ತೇಜಸ್ವಿ ಅವರು ಆರೋಪಿಯನ್ನು ತಡೆಯಲು ತಮ್ಮ ಸರ್ವಿಸ್ ಪಿಸ್ತೂಲ್‌ನಿಂದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಪಿಎಸ್‌ಐ ತೇಜಸ್ವಿ ಅವರಿಗೂ ಗಾಯಗಳಾಗಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಪಿಎಸ್‌ಐ ಅವರ ಆರೋಗ್ಯ ವಿಚಾರಿಸಿದ್ದಾರೆ.

ಇನ್ನು ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದು, ಶೋಧ ಕಾರ್ಯ ಮುಂದುವರಿದಿದೆ.