Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಉಡುಪಿ: ಯುಪಿಸಿಎಲ್ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದ ಆರ್ಥಿಕ ವೈಮನಸ್ಸೇ ಉಡುಪಿ ಕಾಂಗ್ರೆಸ್‌ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ ಹತ್ಯೆಗೆ ಪ್ರಮುಖ ಕಾರಣವಾಗಿರಬಹುದೇ ಎಂಬ ಅನುಮಾನ ಇದೀಗ ತನಿಖೆಯಲ್ಲಿ ವ್ಯಕ್ತವಾಗಿದೆ.

Out Look Fashion

ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಉತ್ತರ ಭಾರತದ ವ್ಯಕ್ತಿಯೊಬ್ಬ ಡೇವಿಡ್ ಹತ್ಯೆಗೆ ಸುಪಾರಿ ನೀಡಿರುವುದನ್ನ ಪತ್ತೆಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

Jaya Refrigeration and Air Condition

23 ಕೋಟಿ ವೆಚ್ಚದ ಗುತ್ತಿಗೆ ವಿಚಾರದಲ್ಲಿ ವೈಮನಸ್ಸು 
ಡೇವಿಡ್ ಹಾಗೂ ಮತ್ತೊಬ್ಬ ಗುತ್ತಿಗೆದಾರನ ನಡುವೆ ಸುಮಾರು 23 ಕೋಟಿ ರೂ. ಮೌಲ್ಯದ ಯುಪಿಸಿಎಲ್ ಗುತ್ತಿಗೆ ವಿಚಾರದಲ್ಲಿ ಆರ್ಥಿಕ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದೆ. ಇದೇ ವೈಮನಸ್ಸು ಹತ್ಯೆಗೆ ಪ್ರಮುಖ ಕಾರಣವಾಗಿರಬಹುದೆಂದು ಎಸ್ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.