Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರನ್ನು ಬೆದರಿಸುತ್ತಿದ್ದ ಆರೋಪದ ಮೇಲೆ ರೌಡಿಶೀಟರ್‌ ಸೇರಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

Out Look Fashion

ಭಾನುವಾರ ಮಧ್ಯರಾತ್ರಿ ಸುಮಾರು 12ರಿಂದ 12.20ರ ವೇಳೆಗೆ, ರೌಡಿಶೀಟರ್ ಶಕೀರ್ ಎಂಬಾತ ಮದ್ಯ ಸೇವಿಸಿ ಕತ್ತಿ ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಾ ಜನರಿಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

Jaya Refrigeration and Air Condition

ಈ ವೇಳೆ ಆತನ ಜೊತೆ ಆಟೋ ಚಾಲಕ ಅಸ್ಪಕ್ ಕೂಡ ಇದ್ದ ಎನ್ನಲಾಗಿದ್ದು, ಘಟನೆ ಕುರಿತು ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆಯುಧ ಕಾಯ್ದೆ ಸೇರಿದಂತೆ ವಿವಿಧ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.