Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪಟ್ಟೆ ಬಡಗನ್ನೂರು: ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ವತಿಯಿಂದ ಸೆಪ್ಟೆಂಬರ್ 5ರಂದು ನಡೆಯಲಿರುವ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ಸಮಾಲೋಚನಾ ಸಭೆ ನಡೆಯಿತು.

Out Look Fashion

ಆಗಸ್ಟ್ 9ರಂದು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

Jaya Refrigeration and Air Condition

ಸಭೆಯನ್ನುದ್ದೇಶಿಸಿ ಮಾತನಾಡಿದ ಗೋಪಾಲಕೃಷ್ಣ ಭಟ್, “ಇದು ಕೇವಲ ಶಾಲೆಯ ಕಾರ್ಯಕ್ರಮವಲ್ಲ. ನಮ್ಮ ಊರಿನ ಕಾರ್ಯಕ್ರಮ. ಎಲ್ಲರೂ ಸಂಪೂರ್ಣ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

ಸಭೆಯಲ್ಲಿ ಸಂಸ್ಥೆಗಳ ನಿರ್ದೇಶಕರಾದ ಗಣರಾಜ ಕುಂಬ್ಳೆ, ಸಂಚಾಲಕರಾದ ವಿಘ್ನೇಶ್ ಹಿರಣ್ಯ, ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀಲಿಂಗಪ್ಪ ಗೌಡ ಮೂಡಿಕೆ, ಶಾಲಾ ಮುಖ್ಯಗುರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಶ್ರೀಕೃಷ್ಣ ಲೀಲೋತ್ಸವವನ್ನು ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ಸಭೆಯಲ್ಲಿ ವಿವಿಧ ಉಪಸಮಿತಿಗಳ ಸಂಚಾಲಕರನ್ನು ನೇಮಕ ಮಾಡಲಾಯಿತು.

ಪಟ್ಟೆ ಪರಿಸರದ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಸಾಮಾಜಿಕ ಕಾರ್ಯಕರ್ತರು ಮತ್ತು ಹಿರಿಯ ವಿದ್ಯಾರ್ಥಿಗಳು ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ತಮ್ಮ ಸಹಕಾರದ ಭರವಸೆ ನೀಡಿದರು.

ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಿಘ್ನೇಶ್ ಹಿರಣ್ಯ ಸ್ವಾಗತಿಸಿ, ಧನ್ಯವಾದಗಳನ್ನು ಸಮರ್ಪಿಸಿದರು. ವಿದ್ಯಾಸಂಸ್ಥೆಗಳ ಶಿಕ್ಷಕರು ಸಭೆಯ ಆಯೋಜನೆಗೆ ಸಹಕರಿಸಿದರು.