Akshaya Sharadhotsava
Darbe Salon
Mahalingeshwara Car Air Condition
New Dot Dress Mart

ವಿಟ್ಲ: ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದರ ಕುರಿತು ಬಂದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸರು, ಗಾಂಜಾ ಸೇವಿಸಿದ ಆರೋಪದ ಮೇಲೆ ನಾಲ್ವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Out Look Fashion

ಆಗಸ್ಟ್ 9ರಂದು ಸಂಜೆ ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ಕಾರೊಂದು ಅನುಮಾನಾಸ್ಪದವಾಗಿ ಕಂಡುಬರುತ್ತಿರುವುದಾಗಿ ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ನಾಗರಾಜ ಕೆ. (32) ಎಂಬಾತನ ಮನೆಯ ಅಂಗಳದಲ್ಲಿ KA-17-N-7443 ನೋಂದಣಿ ಸಂಖ್ಯೆಯ ಕಾರು ಪತ್ತೆಯಾಗಿದೆ.

Jaya Refrigeration and Air Condition

ಸ್ಥಳದಲ್ಲಿ ನಾಲ್ವರು ವ್ಯಕ್ತಿಗಳು ಮನೆಯ ಜಗಲಿಯಲ್ಲಿ ಕುಳಿತಿದ್ದು, ಅವರನ್ನು ವಿಚಾರಿಸಿದಾಗ ಮನೆ ಮಾಲೀಕ ನಾಗರಾಜ ಕೆ., ಕೊಳ್ನಾಡು ನಿವಾಸಿ ಕುಮಾರ್ ಕೃಷ್ಣ (27), ಕೇಪು ನಿವಾಸಿ ಅಬ್ದುಲ್ ಜಲೀಲ್ (40) ಹಾಗೂ ವಿಟ್ಲ ಕಸಬಾ ನಿವಾಸಿ ಅಬ್ದುಲ್ ಖಾದರ್ ಯು. (31) ಎಂದು ತಿಳಿದುಬಂದಿದೆ.

ವಿಚಾರಣೆ ವೇಳೆ ನಾಲ್ವರೂ ಕಾರಿನಲ್ಲಿ ಗಾಂಜಾ ತಂದು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 173/2026ರಂತೆ ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.