




ಉಪ್ಪಿನಂಗಡಿ, ಆ.11: ಉಪ್ಪಿನಂಗಡಿಯ ಕೂಟೇಲು–ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾಗಿ ಉಂಟಾಗಿರುವ ಗೊಂದಲ ಹಾಗೂ ರಸ್ತೆ ಸಮಸ್ಯೆಯನ್ನು ಸ್ಥಳೀಯ ನಾಗರಿಕರು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರ ಗಮನಕ್ಕೆ ತಂದಿದ್ದರು.

ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸಂಸದರು ಸಂಬಂಧಪಟ್ಟ ಇಂಜಿನಿಯರ್ ಹಾಗೂ ಪ್ರಸನ್ನ ದರ್ಬೆ ಅವರನ್ನು ಸ್ಥಳಕ್ಕೆ ಕಳುಹಿಸಿದ್ದರು. ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಇಂಜಿನಿಯರ್ ಅವರು ರಸ್ತೆಯ ಸಮಸ್ಯೆಯನ್ನು ಪರಿಶೀಲಿಸಿ, ಸಮಸ್ಯೆಯ ಗಂಭೀರತೆಯನ್ನು ಮನಗಂಡಿದ್ದಾರೆ.


ಈ ಕುರಿತು ಉನ್ನತ ಅಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದರ ಜೊತೆಗೆ ರಸ್ತೆ ಸಮಸ್ಯೆಯನ್ನು ಬಗೆಹರಿಸಿ, ಅಗತ್ಯವಿರುವ ಕಡೆ ರಸ್ತೆ ಅಗಲೀಕರಣ ಮಾಡುವುದಾಗಿ ಸ್ಥಳೀಯ ನಾಗರಿಕರಿಗೆ ಭರವಸೆ ನೀಡಿದರು.
ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಆ ಭಾಗದ ನಾಗರಿಕರು ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಉಪ್ಪಿನಂಗಡಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಸುರೇಶ್ ಅತ್ರಮಜಲ್, ಪುತ್ತೂರು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆದೇಶ ಶೆಟ್ಟಿ, ಹಿರಿಯರಾದ ಜಯಂತ್ ಪುರೋಲಿ, ಸ್ಥಳೀಯರಾದ ಪ್ರತಾಪ್ ಪೆರಿಯಡ್ಕ, ಧರ್ಮಪ್ಪ ನಾಯ್ಕ, ಸುಚಿತ್, ಉದಿತ್ ರಂಗಜೆ, ಗಿರೀಶ್, ಪ್ರಶಾಂತ್ ರಾಮಕುಂಜ, ನವೀನ್, ಹರೀಶ್ ಪಟ್ಲ ಮತ್ತಿತರರು ಉಪಸ್ಥಿತರಿದ್ದರು.
