



ಮಂಗಳೂರು: ಪಾದಚಾರಿಗಳ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ಮಂಗಳೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ.


ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ 2026ರಿಂದ ಈವರೆಗೆ No Parking, Footpath Parking, Wrong Parking, Double Parking ಹಾಗೂ Traffic Obstruction ಸೇರಿದಂತೆ ವಿವಿಧ ಪಾರ್ಕಿಂಗ್ ನಿಯಮ ಉಲ್ಲಂಘನೆಗಳ ವಿರುದ್ಧ ಒಟ್ಟು 7,490 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಿಂದ 3 ಲಕ್ಷದ 7 ಸಾವಿರದ 600 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಇದರಲ್ಲಿ 1,080 Footpath Parking ಪ್ರಕರಣಗಳು ಸೇರಿವೆ.

ಇನ್ನು ನಕಲಿ ಹಾಗೂ ದೋಷಪೂರಿತ ನಂಬರ್ ಪ್ಲೇಟ್ಗಳ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಆಗಸ್ಟ್ 4ರಿಂದ 12ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.
ಈ ವೇಳೆ ದೋಷಪೂರಿತ ನಂಬರ್ ಪ್ಲೇಟ್ ಹೊಂದಿದ್ದ 258 ವಾಹನಗಳ ವಿರುದ್ಧ ಹಾಗೂ ನಂಬರ್ ಪ್ಲೇಟ್ ಅಳವಡಿಸದೇ ಸಂಚರಿಸುತ್ತಿದ್ದ 74 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಒಟ್ಟು 332 ಪ್ರಕರಣಗಳಲ್ಲಿ 3 ಲಕ್ಷದ 1 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.
ವಾಹನ ಮಾಲೀಕರು ತಮ್ಮ ವಾಹನಗಳಿಗೆ ನಿಯಮಾನುಸಾರ ಸ್ಪಷ್ಟವಾದ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಳ್ಳಬೇಕು. ನಿಗದಿಪಡಿಸಿರುವ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಪೊಲೀಸರು ಸೂಚಿಸಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ ವಿರುದ್ಧದ ವಿಶೇಷ ಕಾರ್ಯಾಚರಣೆ ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದ್ದು, ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ ಸುರಕ್ಷಿತ ಸಂಚಾರಕ್ಕೆ ಸಹಕರಿಸುವಂತೆ ಮಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ.
