




ಪುತ್ತೂರು ನಗರಸಭೆ ಕಚೇರಿಗೆ ಇಂದು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡಿವೈಎಸ್‌ಪಿ ಗಾನಾ ಪಿ. ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ನಗರಸಭೆ ಕಚೇರಿಗೆ ಆಗಮಿಸಿದ್ದು, ವಿವಿಧ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲನೆ ನಡೆಸುತ್ತಿರುವುದು ತಿಳಿದುಬಂದಿದೆ.

ಪರಿಶೀಲನೆ ಹಿನ್ನೆಲೆಯಲ್ಲಿ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಚೇರಿಯಲ್ಲೇ ಇರುವಂತೆ ಸೂಚನೆ ನೀಡಲಾಗಿದೆ ಎಂದು ಸದ್ಯಕ್ಕೆ ತಿಳಿದುಬಂದಿದೆ.
ಯಾವ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ, ದಾಳಿಗೆ ನಿಖರ ಕಾರಣವೇನು ಹಾಗೂ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆಯಲ್ಲಿ ಏನೆಲ್ಲ ಅಂಶಗಳು ಬೆಳಕಿಗೆ ಬಂದಿವೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
