




ಕೆಯ್ಯೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆ.15ರಂದು ಬೊಳಿಕ್ಕಳ ನೆಲ್ಲಿಗುರಿ ಬಳಿ ನಡೆದಿದೆ.

ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬೈಕ್ ಸವಾರ ಕುಮಾರಮಂಗಿಲ ಬಳಿಯ ಬಂಬಿಲ ನಿವಾಸಿ 24 ವರ್ಷದ ಅಭಿಲಾಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಅಭಿಲಾಷ್ ಅವರು ತಂದೆ, ತಾಯಿ ಹಾಗೂ ಅಣ್ಣನನ್ನು ಅಗಲಿದ್ದಾರೆ.
