




ಉಪ್ಪಿನಂಗಡಿ: ಪರಿಚಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಕ್ರಮವಾಗಿ ತಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಆರೋಪದಡಿ 9 ಮಂದಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ.12ರಂದು ಕೆಲಸ ಮುಗಿಸಿ ರಾತ್ರಿ ಫಾಯಿಝಾ ಎಂಬ 18 ವರ್ಷದ ಯುವತಿ ತನ್ನ ಪರಿಚಿತರಾದ ಸಿಪ್ನಾನ್, ಝಾಹಿರ್ ಹಾಗೂ ಸಫಿಯಾ ಅವರೊಂದಿಗೆ ಕಾರಿನಲ್ಲಿ ಮನೆಗೆ ಬಂದಿದ್ದರು. ಫಾಯಿಝಾ ಅವರನ್ನು ಮನೆಗೆ ಬಿಟ್ಟು ಉಳಿದ ಮೂವರು ಕಡಬದ ಕೊಣಾಲು ಕೋಲ್ಪೆ ಕಡೆಗೆ ತೆರಳಿದ್ದರು.

ಅವರು ಕೋಲ್ಪೆ ತಲುಪಿದ ವೇಳೆ ಜಾಬಿರ್, ಸಿದ್ದೀಕ್, ಉನೈಸ್, ರಂಶಿಕ್, ಸಂಶುದ್ದೀನ್, ಜಾಫರ್, ಆಶಿತ್, ಆಚೂರು ಅಶ್ರಫ್ ಹಾಗೂ ಅಶ್ರಫ್ ಕೋಲ್ಪೆ ಎಂಬವರು ಅಕ್ರಮವಾಗಿ ತಡೆದು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ವೇಳೆ ಸ್ಥಳಕ್ಕೆ ಬಂದ ಫಾಯಿಝಾ, ಜಮಾಲ್ ಹಾಗೂ ಫಾಯಿಝಾ ಅವರ ತಂಗಿಯನ್ನೂ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 107/2026ರಂತೆ BNSನ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
