Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯ ಸಿಟಿ ಸೆಂಟರ್ ಮಾಲ್‌ನಲ್ಲಿರುವ ಕೆಎಫ್‌ಸಿ ಔಟ್‌ಲೆಟ್‌ನಲ್ಲಿ ಕಲುಷಿತ ಆಹಾರ ಪೂರೈಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Out Look Fashion

ಮಾಜಿ ಮೇಯರ್ ಹಾಗೂ ಬಿಜೆಪಿ ನಾಯಕಿ ಕವಿತಾ ಸನಿಲ್ ಅವರು ತಮ್ಮ 10 ವರ್ಷದ ಮಗುವಿಗಾಗಿ ಸ್ವಿಗ್ಗಿ ಮೂಲಕ ಪೆರಿ-ಪೆರಿ ಚಿಕನ್ ಆರ್ಡರ್ ಮಾಡಿದ್ದರು ಎನ್ನಲಾಗಿದ್ದು, ಚಿಕನ್ ಸೇವಿಸುವ ವೇಳೆ ಮಾಂಸ ಕಪ್ಪು ಬಣ್ಣಕ್ಕೆ ತಿರುಗಿರುವುದು ಹಾಗೂ ದುರ್ವಾಸನೆ ಬರುತ್ತಿರುವುದು ಗಮನಕ್ಕೆ ಬಂದಿದೆ.

Jaya Refrigeration and Air Condition

ಈ ಬಗ್ಗೆ ಕವಿತಾ ಸನಿಲ್ ಅವರು ಬಿಲ್ ಸಮೇತ ಕೆಎಫ್‌ಸಿ ಔಟ್‌ಲೆಟ್‌ಗೆ ತೆರಳಿ ಆರೋಗ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಬಳಿಕ ವಿಷಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಗಮನಕ್ಕೂ ತರಲಾಗಿದ್ದು, ಸಚಿವರ ಸೂಚನೆಯಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಪ್ರವೀಣ್ ಜಂಟಿಯಾಗಿ ದಾಳಿ ನಡೆಸಿದ್ದಾರೆ.

ಪರಿಶೀಲನೆ ವೇಳೆ ನೈರ್ಮಲ್ಯವಿಲ್ಲದ ಸ್ಟೋರೇಜ್‌ನಲ್ಲಿ ಮಾಂಸ ದಾಸ್ತಾನು ಮಾಡಿರುವುದು, ದುರ್ವಾಸನೆ ಬರುತ್ತಿದ್ದ ಮಾಂಸ ಹಾಗೂ ಅವಧಿ ಮೀರಿದ ಎಣ್ಣೆ ಪತ್ತೆಯಾಗಿದೆ ಎನ್ನಲಾಗಿದೆ. ಅಧಿಕಾರಿಗಳು ಪತ್ತೆಯಾದ ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕೆಎಫ್‌ಸಿಗೆ ಬೆಂಗಳೂರಿನಿಂದ ಕೋಳಿ ಮಾಂಸ ಸರಬರಾಜಾಗುತ್ತಿದ್ದು, ಹಲವು ತಿಂಗಳ ಹಿಂದಿನ ಮಾಂಸವನ್ನು ದಾಸ್ತಾನಿಡಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಸ್ಟೋರೇಜ್ ರೂಂನಲ್ಲಿ ಮೂರು ಮಾದರಿಯ ಚಿಕನ್ ಹಾಗೂ ಅವಧಿ ಮೀರಿದ ಎಣ್ಣೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಪತ್ತೆಯಾದ ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ಮೈಸೂರಿನ ಆಹಾರ ತಪಾಸಣಾ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ. ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.