Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ.

Out Look Fashion

ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣಜೆ.ರಾವ್‌(21ವ)ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಯಾರೂ ಇಲ್ಲದ ವೇಳೆ ಆತನ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಆರೋಪಿ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Jaya Refrigeration and Air Condition

ಆರೋಪಿ ನಾಪತ್ತೆಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಈ ಮಧ್ಯೆ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜೂ.30ರಂದು ನಡೆದು ಮುಂದಿನ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ.