Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ನಗರ ಸಂಚಾರ ಪೊಲೀಸ್ ವತಿಯಿಂದ ಶಾಲಾ ಮಕ್ಕಳ ಬಸ್ ಸುರಕ್ಷತೆ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಬುಧವಾರ ಮಂಗಳೂರಿನ ಪುರಭವನದಲ್ಲಿ ನಡೆಯಿತು. ಸದರಿ ಕಾರ್ಯಕ್ರಮದಲ್ಲಿ ಮಂಗಳೂರು ನಗರದ ವಿವಿಧ ಶಾಲೆಗಳ ಶಾಲಾ ಬಸ್ ಚಾಲಕರು, ಮಾಲಿಕರು, ಬಸ್ ಮ್ಯಾನೇಜರ್‌ಗಳು ಹಾಗೂ ಶಾಲಾ ಆಡಳಿತ ಮಂಡಳಿಯ ಸುಮಾರು 600 ಮಂದಿ ಭಾಗವಹಿಸಿದ್ದರು.

Out Look Fashion

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಮುಖ್ಯವಾಗಿ ಶಾಲಾ ಬಸ್ ಚಾಲಕರು ಹಾಗೂ ನಿರ್ವಾಹಕರು ಪಾಲಿಸಬೇಕಾದ ಕಾನೂನು ನಿಯಮಗಳು, ರಸ್ತೆ ಸುರಕ್ಷತಾ ಕ್ರಮಗಳು, ಸಂಚಾರ ನಿಯಮಗಳು ಹಾಗೂ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಜವಾಬ್ದಾರಿಗಳ ಕುರಿತು ಸಮಗ್ರವಾಗಿ ತಿಳುವಳಿಕೆ ನೀಡಲಾಯಿತು.

Jaya Refrigeration and Air Condition

ಅದೇ ರೀತಿ, ಶಾಲಾ ಆಡಳಿತ ಮಂಡಳಿಯವರು ಶಾಲಾ ವಾಹನಗಳ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಚಾಲಕರು ಹಾಗೂ ನಿರ್ವಾಹಕರ ಕರ್ತವ್ಯಗಳನ್ನು ಸಮರ್ಪಕವಾಗಿ ಮೇಲ್ವಿಚಾರಣೆ ಮಾಡುವುದು ಮತ್ತು ಶಾಲಾ ಮಕ್ಕಳ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಯಿತು. ಅಲ್ಲದೇ, ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಶಾಲಾ ಬಸ್ ಚಾಲಕರ ವಿರುದ್ಧ ಕಾನೂನು ರೀತ್ಯಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಲಾಯಿತು. ಕಾರ್ಯಕ್ರಮದ ಸಂದರ್ಭದಲ್ಲಿ ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಪಾಲನೆಯ ಕುರಿತು ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.