



ವಿಟ್ಲ: ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕ ನರಸಿಂಹ ಶೆಟ್ಟಿ ಮಾಣಿ ಅವರಿಗೆ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ.


ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಲಕ್ಷಪ್ಪ ಕೋಡಿ ನಿವಾಸಿಯಾಗಿರುವ ನರಸಿಂಹ ಶೆಟ್ಟಿ ಅವರ ವಿರುದ್ಧ ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರು ವರದಿ ಸಲ್ಲಿಸಿದ್ದರು ಎನ್ನಲಾಗಿದೆ.

ಈ ವರದಿಯ ಆಧಾರದ ಮೇಲೆ, ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(2) ಮತ್ತು 55(ಬಿ) ಅಡಿಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ.
ನೋಟಿಸ್‌ಗೆ ನಿಗದಿತ ಅವಧಿಯಲ್ಲಿ ಉತ್ತರಿಸುವಂತೆ ನರಸಿಂಹ ಶೆಟ್ಟಿ ಅವರಿಗೆ ಸೂಚಿಸಲಾಗಿದ್ದು, ಅವರ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳುವ ಕುರಿತು ಪೊಲೀಸ್ ಇಲಾಖೆ ಮುಂದಿನ ಪ್ರಕ್ರಿಯೆ ನಡೆಸುತ್ತಿದೆ.
