




ಗುರುವಾಯನಕೆರೆ: ಪುತ್ತೂರಿನಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಓವರ್‌ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು (ಸೆ.07) ಗುರುವಾಯನಕೆರೆಯ ಕುಲಾಲ ಮಂದಿರದ ಬಳಿ ನಡೆದಿದೆ.

ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬಸ್ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿಯಲ್ಲಿದ್ದ ಅಬ್ದುಲ್ ರಹ್ಮಾನ್ ಎಂಬವರ ಮನೆಯ ಅಂಗಳಕ್ಕೆ ನುಗ್ಗಿ ನಿಂತಿದೆ.

ಬಸ್‌ನಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಘಟನೆಯಿಂದ ಮನೆಯ ಅಂಗಳ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗೆ ಉಂಟಾಗಿರುವ ಹಾನಿಯ ಪ್ರಮಾಣದ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ.
