Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ಐತಿಹಾಸಿಕ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವಿರುದ್ಧ ಹಣಕಾಸು ಹಾಗೂ ದೇವಸ್ಥಾನದ ಜಾಗಕ್ಕೆ ಸಂಬಂಧಿಸಿದಂತೆ ಗಂಭೀರ ಅವ್ಯವಹಾರದ ಆರೋಪ ಕೇಳಿಬಂದಿದೆ.

Out Look Fashion

ದೇವಸ್ಥಾನದ ಆಡಳಿತ ಮಂಡಳಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಬೃಹತ್ ಪ್ರಮಾಣದ ಹಣಕಾಸು ಅವ್ಯವಹಾರ ನಡೆಸಿದೆ ಎಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆರೋಪಿಸಿದೆ.

Jaya Refrigeration and Air Condition

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಮುಖಂಡ ದಿನೇಶ್ ಕುಮಾರ್ ಜೈನ್ ಅವರು ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

2025ರ ಜನವರಿಯಿಂದ ಡಿಸೆಂಬರ್‌ವರೆಗೆ ಹಾಗೂ 2026ರ ಮೇ ತಿಂಗಳವರೆಗೆ ಸಣ್ಣಪುಟ್ಟ ಖರ್ಚುಗಳ ಹೆಸರಿನಲ್ಲಿ ಒಟ್ಟು ಸುಮಾರು 40 ಲಕ್ಷ ರೂಪಾಯಿ ಪಡೆಯಲಾಗಿದೆ. ಇದರ ಜೊತೆಗೆ 30 ಲಕ್ಷ ರೂಪಾಯಿಗಳನ್ನು ಸೆಲ್ಫ್ ಡ್ರಾ ಮಾಡಲಾಗಿದೆ ಎಂದು ಸಮಿತಿ ಆರೋಪಿಸಿದೆ.

ಅಲ್ಲದೆ, ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿನ ಕಟ್ಟಡ ತೆರವು ಕಾರ್ಯಕ್ಕಾಗಿ ಜೆಸಿಬಿ ಹಾಗೂ ಹಿಟಾಚಿ ಕಾಮಗಾರಿಗೆ ಸುಮಾರು 70 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ದೊರೆತ ಮಾಹಿತಿಯನ್ನು ಉಲ್ಲೇಖಿಸಿ ಸಮಿತಿ ತಿಳಿಸಿದೆ.

ತೆಂಕಿಲದಲ್ಲಿ ಸುಮಾರು 15 ಎಕರೆ ದೇವಸ್ಥಾನದ ಜಾಗವನ್ನು ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಬೆಲೆಬಾಳುವ ಮರಗಳನ್ನು ಕಡಿದು ಮಾರಾಟ ಮಾಡಲಾಗಿದೆ ಎಂಬ ಆರೋಪವನ್ನೂ ಸಮಿತಿ ಮಾಡಿದೆ.

ಈ ಎಲ್ಲಾ ಆರೋಪಗಳ ಹಿನ್ನೆಲೆಯಲ್ಲಿ ದೇವಸ್ಥಾನದ ಪ್ರಸ್ತುತ ವ್ಯವಸ್ಥಾಪನಾ ಸಮಿತಿಯನ್ನು ತಕ್ಷಣ ಅಮಾನತುಗೊಳಿಸಿ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಸಮಿತಿ ಆಗ್ರಹಿಸಿದೆ.

ಜೊತೆಗೆ, ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿಯನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

ಸಂರಕ್ಷಣಾ ಸಮಿತಿಯ ಬೇಡಿಕೆಗಳನ್ನು ಧಾರ್ಮಿಕ ದತ್ತಿ ಇಲಾಖೆ ಒಂದು ವಾರದೊಳಗೆ ಈಡೇರಿಸದಿದ್ದರೆ, ಸೆಪ್ಟೆಂಬರ್ 21ರಂದು ಬೃಹತ್ ಭಕ್ತರ ಸಭೆ ನಡೆಸಿ ಜನಾಂದೋಲನ ಕೈಗೊಳ್ಳಲಾಗುವುದು ಎಂದು ದಿನೇಶ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ.