Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ಕಳೆದ 09 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

Out Look Fashion

ಮಂಗಳೂರು ಉತ್ತರ ಪೊಲೀಸ್ ಠಾಣೆಯ ಕ್ರೈಂ ನಂ. 197/2017 ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಗಳೂರಿನ ಉಳ್ಳಾಲ ಮೂಲದ 34 ವರ್ಷದ ಅಷ್ಪಕ್ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

Jaya Refrigeration and Air Condition

ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಿಂದ ಎಲ್‌ಪಿ ವಾರಂಟ್ ಹೊರಡಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, 2026ರ ಸೆಪ್ಟೆಂಬರ್ 8ರಂದು ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.