




ಬೈಂದೂರು: ಶಿರೂರು ಸಮೀಪ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಲಾರಿಯೊಂದು ಹೈವೇ ಪಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದು, ನಾಲ್ಕು ಬೈಕ್‌ಗಳಿಗೆ ಗುದ್ದಿದ ಸರಣಿ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಮೃತರನ್ನು ಶಿರೂರಿನ ನಾಗೇಂದ್ರ ಮಹಾಲೆ, 45 ವರ್ಷ ಎಂದು ಗುರುತಿಸಲಾಗಿದೆ.

ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದ ವಾಹನವನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ರಸ್ತೆ ತಡೆ ಮಾಡಲಾಗಿತ್ತು. ವಾಹನ ಸಂಚಾರ ನಿಯಂತ್ರಣಕ್ಕಾಗಿ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಇದೇ ವೇಳೆ ಇಳಿಜಾರು ರಸ್ತೆಯಲ್ಲಿ ಅತಿವೇಗವಾಗಿ ಬಂದ ಸರಕು ತುಂಬಿದ ಲಾರಿ ನಿಯಂತ್ರಣ ತಪ್ಪಿ ಹೈವೇ ಪಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ನಾಲ್ಕು ಬೈಕ್‌ಗಳಿಗೂ ಗುದ್ದಿ ಜಖಂಗೊಳಿಸಿದೆ.
ರಬ್ಬರ್ ತುಂಬಿದ್ದ ಲಾರಿ ಕೇರಳದಿಂದ ಮಹಾರಾಷ್ಟ್ರದ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
