



ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ
ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿ ನಾಪತ್ತೆಯಾಗಿದ್ದ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈತನ ವಿರುದ್ಧ ದ.ಕ. ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆ (21) ಕೂಡ ಪುತ್ತೂರು ನಗರಸಭಾ ವ್ಯಾಪ್ತಿಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಪೂರ್ಣಗೊಳಿಸಿದ್ದಾರೆ.


ಆರೋಪಿ ಶ್ರೀ ಕೃಷ್ಣ ಜೆ ರಾವ್ (21) ಎಂಬಾತನನ್ನು, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣಾ ಪೊಲೀಸರು ದಿನಾಂಕ: 04.07.2025 ರಂದು ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿರುತ್ತಾರೆ. ಆರೋಪಿತನ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.

