




ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 25ರಂದು ನಡೆದಿದೆ.

ವೀರಮಂಗಲದ ಸುಂದರ ಅವರ ಪತ್ನಿ ಮಮತಾ (32) ಮೃತಪಟ್ಟವರು.

ಅಕ್ಟೋಬರ್ 24ರಂದು ಮಮತಾ ಅವರು ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 25ರಂದು ಅವರು ಮೃತಪಟ್ಟಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
