




ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ದ ಸ್ಥಾಪನ ದಿನಾಚರಣೆಯ ಅಂಗವಾಗಿ 2025 ಆಗಸ್ಟ್ 16 ರಂದು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ 15ನೇ ವರ್ಷದ ಮೊಸರು ಕುಡಿಕೆ ಮತ್ತು ವೈಭವದ ಶೋಭಯಾತ್ರೆ ಉತ್ಸವದ ಆಮಂತ್ರಣ ಪತ್ರಿಕೆಯು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.



ಆಮಂತ್ರಣ ಪತ್ರಿಕೆಯನ್ನು ಉತ್ಸವ ಸಮಿತಿಯ ಸಂಚಾಲಕರಾದ ಅರುಣ್ ಕುಮಾರ್ ರೈ ಆನಾಜೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್, ಹಿಂದೂ ಮುಖಂಡ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ, ಜಯಂತ್ ಕುಂಜೂರು ಪಂಜ, ಗಣೇಶ್ ಕಾಮತ್, ಕೇಶವ ಪ್ರಸಾದ್ ಬಿ.ವಿ., ದಾಮೋದರ ಪಾಟಾಳಿ, ಜಿತೇಶ್ ಬಲ್ನಾಡು , ಜಯಂತ್ ಶೆಟ್ಟಿ ಕಂಬಳತ್ತಡ್ಡ, ಪ್ರವೀಣ್ ಕಲ್ಲೇಗ, ರೂಪೇಶ್ ಬಲ್ನಾಡು, ನಾಗೇಶ್ ಕೆಮ್ಮಾಯಿ, ಮತ್ತು ಬಜರಂಗದಳ ದ ಕಾರ್ಯಕರ್ತರು ಉಪಸ್ಥಿತರಿದ್ದರು.

